Sunday, July 11, 2010

Tanuvu Ninnadu Manavu Ninnadu

ತನುವು ನಿನ್ನದು ಮನವು ನಿನ್ನದು
ನನ್ನ ಜೀವನ ಘನವು ನಿನ್ನದು
ನಾನು ನಿನ್ನವನೆಂಬೋ ಹೆಮ್ಮೆಯ
ಋಣವು ಮಾತ್ರವೇ ನನ್ನದು

ನೀನು ಹೊಳೆದರೆ ನಾನು ಹೊಳೆವೆನು
ನೀನು ಬೆಳೆದರೆ ನಾನು ಬೆಳೆವೆನು
ನನ್ನ ಹರಣದ ಹರಣ ನೀನು
ನನ್ನ ಮರಣದ ಮರಣವು

ನನ್ನ ಮನದಲಿ ನೀನೆ ಯುಕ್ತಿ
ನನ್ನ ಹೃದಯದಿ ನೀನೆ ಭಕ್ತಿ
ನೀನೆ ಮಾಯಾ ಮೋಹಶಕ್ತಿಯು
ನನ್ನ ಜೀವನ ಮುಕ್ತಿಯು


anantaswamiya dhwaniyalli

No comments: